September 17, 2025

Vokkuta News

kannada news portal

ತುಳು,ಕೊಂಕಣಿ,ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ನೇಮಕ.

ಮಂಗಳೂರು: ಕರ್ನಾಟಕ ಸರಕಾರವು ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷರನ್ನು ನೇಮಕಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.ಕನ್ನಡ ಸಂಸ್ಕೃತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ತಾರನಾಥ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು.ಎಚ್. ಹಾಗೂ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಅವರನ್ನು ನೇಮಿಸಿದೆ.ಕಳೆದ ಕೆಲವು ವರ್ಷಗಳಿಂದ ಸಾಹಿತ್ಯ ಅಕಾಡಮಿ ಅಧ್ಯಕ್ಷರ ಹುದ್ದೆ ಖಾಲಿ ಉಳಿದಿತ್ತು.