June 29, 2025

Vokkuta News

kannada news portal

ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿದೇಶ ಪ್ರಯಾಣ ವಿಮಾನ ಪತನ: 242 ಮಂದಿ ಸೇರಿ,ಹೆಚ್ಚಿನ ನಾಗರಿಕರ ಸಾವು?.

ಅಹಮದಾಬಾದ್‌ನ ಮೇಘನಿ ನಗರದಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡ ಮೇಲೆ ಏರ್ ಇಂಡಿಯಾ ವಿಮಾನ ಪತನಗೊಂಡಿದೆ.

ಅಹಮದಾಬಾದ್‌: 242 ಮಂದಿಯನ್ನು ಹೊತ್ತು ಸಾಗುತ್ತಿದ್ದ ಏ‌ರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಾಸ್ಟೆಲ್ ಕಟ್ಟಡ ಮೇಲೆ ಪತನಗೊಂಡಿರುವುದಾಗಿ ವರದಿಯಾಗಿದೆ.

ಹಾಸ್ಟೆಲ್ ಕಟ್ಟಡದ ಮೇಲೆ ಪತನಗೊಂಡ ವಿಮಾನದಿಂದಾಗಿ 20 ಮಂದಿ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂಬ ಬಗ್ಗೆ ವರದಿಗಳು ಬರುತ್ತಿವೆ!

ಈ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು ಅಹಮದಾಬಾದ್‌ನ ಮೇಘನಿ ನಗರದಲ್ಲಿರುವ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡ ಮೇಲೆ ಏರ್ ಇಂಡಿಯಾ ವಿಮಾನ ಪತನಗೊಂಡಿದೆ. ಈ ವೇಳೆ ಹಾಸ್ಟೆಲ್‌ ನಲ್ಲಿ 50ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಇಲ್ಲಿನ ಮೆಸ್ ನಲ್ಲಿ ಮಧ್ಯಾಹ್ನದ ಊಟ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಘಟನೆಯಲ್ಲಿ 20 ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಗುರುವಾರ ಮಧ್ಯಾಹ್ನ 1:10 ರ ಸುಮಾರಿಗೆ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಬೋಯಿಂಗ್ 787-8 ಡೀಮ್‌ಲೈನ‌ರ್ ವಿಮಾನ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಅಹಮದಾಬಾದ್‌ನ ಮೇಘನಿ ನಗರದಲ್ಲಿರುವ ಹಾಸ್ಟೆಲ್‌ ಕಟ್ಟಡದ ಮೇಲೆ ಪತನಗೊಂಡಿದ್ದು, ಬೋರ್ಡ್ ನಲ್ಲಿದ್ದ ಪ್ರಯಾಣಿಕರಲ್ಲಿ ಜೀವಂತ ಉಳಿದಿರುವವರ ಸಂಖ್ಯೆ ಶೂನ್ಯ ಎಂದು ತಿಳಿದು ಬಂದಿದೆ.