July 27, 2024

Vokkuta News

kannada news portal

ಶಾಂತಿ ಸುವ್ಯವಸ್ಥೆ ಭಂಗ ಸೃಷ್ಟಿಸುವ ಶಕ್ತಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಲಿ: ವಿಪಕ್ಷ ಉಪ ನಾಯಕ ಯು. ಟಿ. ಖಾದರ್.

ಮಂಗಳೂರು: ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರಿಂದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರ ವಾಸ ಸ್ಥಳಗಳ ಮೇಲೆ ದಾಳಿ ನಡೆದಿದೆ ಮತ್ತು ಅನೇಕ ಪಿಎಫ್ಐ ಮತ್ತು ಎಸ್ಡಿಪಿಐ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್, ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಸೃಷ್ಟಿಸಿದ್ರೆ ಪೊಲೀಸರು ಕ್ರಮ ಜರುಗಿಸುವುದು ಅನಿವಾರ್ಯ ಎಂದಿದ್ದಾರೆ .

ಅಶಾಂತಿ ಸೃಷ್ಟಿಸುವ ಯಾವುದೇ ಸಂಘಟನೆಗಳ ವಿರುದ್ಧ ಕ್ರಮಕ್ಕೆ ಧರ್ಮಭೇದ ಸಹಮತ ಇದೆ. ಕಾನೂನನ್ನು ಕೈಗೆತ್ತಿಕೊಳ್ಳುವ ಶಕ್ತಿಗಳನ್ನು ಹದ್ದುಬಸ್ತಿನಲ್ಲಿಡೋದು ಸರ್ಕಾರದ ಜವಾಬ್ದಾರಿ. ಶಾಂತಿ ಮತ್ತು ಸೌಹಾರ್ದಯುತ ವಾತಾವರಣವನ್ನು ಸರ್ಕಾರ ನಿರ್ಮಾಣ ಮಾಡಬೇಕು. ಯಾವುದೇ ತಾರತಮ್ಯ ಮಾಡದೇ ಸರ್ಕಾರ ಕ್ರಮ ತೆಗೆದುಕೊಳ್ಳಲಿ ಎಂದರು.

ಇನ್ನು ನಮ್ಮ ರಾಜ್ಯದಲ್ಲಿ ಧಾರ್ಮಿಕ ಗುರುಗಳು, ಉಲೇಮಾಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿಲ್ಲ. ಯಾವುದೇ ಧಾರ್ಮಿಕ ಗುರುಗಳು ಈ ದಾಳಿ ಬಗ್ಗೆ ಅಪಸ್ವರ ಎತ್ತಿದ್ದಾರಾ ಎಂದು ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಪ್ರಶ್ನೆ ಮಾಡಿದ್ದಾರೆ.