November 6, 2024

Vokkuta News

kannada news portal

ದ.ಕ.ಲೋಕಸಭಾ ಕ್ಷೇತ್ರದಿಂದ ಭಾ.ರಾ.ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್ ನಾಮಪತ್ರ ಸಲ್ಲಿಕೆ.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಡಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ಆರ್. ಪೂಜಾರಿ ಬುಧವಾರ ನಾಮ ಪತ್ರ ಸಲ್ಲಿಸಿದರು. ಬುಧವಾರ ಬೆಳಗ್ಗೆ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು,ಕಾರ್ಯಕರ್ತರು ,ಅಭಿಮಾನಿಗಳೊಂದಿಗೆ ಪದ್ಮರಾಜ್.ಆರ್ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು

ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರು ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ನಡೆದ ಮೆರವಣಿಗೆಗೆ ಚಾಲನೆ ನೀಡಿದರು. ತೆರದ ವಾಹನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇದ್ದು, ಮೆರವಣಿಗೆಯಲ್ಲಿ ತುಳುನಾಡ ಧ್ವಜ ರಾರಾಜಿಸುವುದರ ಜೊತೆಗೆ ಗೊಂಬೆ ಬಳಗ, ಚೆಂಡೆ, ಕೊಂಬು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಧ್ವಜದೊಂದಿಗೆ ಹೆಜ್ಜೆ ಹಾಕಿದರು. ಕಾಲ್ನಡಿಗೆ ಜಾಥಾ ಕುದ್ರೋಳಿಯಿಂದ ಹೊರಟು ಜಿ ಏಚ್.ಎಸ್ ರಸ್ತೆಯಾಗಿ ಮಂಗಳೂರು ಮುಖ್ಯರಸ್ತೆಗೆ ಬಂದು ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಡಾ‌.ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕ ಜೆ.ಆರ್‌.ಲೋಬೊ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ,ಮಾಜಿ ಸಚಿವ ಅಭಯಚಂದ್ರ ಜೈನ್,ಕೆ.ಅಶ್ರಫ್,ಶಶಿಧರ್ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

ಕಾಲ್ನಡಿಗೆ ಜಾಥಾ ಮೊದಲು ಕುದ್ರೋಳಿ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್ ಮುಂದಾಳುಗಳು