June 13, 2024

Vokkuta News

kannada news portal

ದ.ಕ ಕ್ಷೇತ್ರ ಬಿಜೆಪಿ ಪಕ್ಷದ ಅಭ್ಯರ್ಥಿ ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ.

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಇಂದಿನ ದಿನ ಗುರುವಾರ ನಾಮಪತ್ರ ಸಲ್ಲಿಸಿದರು.
ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆ ನಡೆಸಿ ರೋಡ್ ಶೋ ನಡೆಸಲಾಯಿತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲು, ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಶಾಸಕರಾದ ಸುನೀಲ್ ಕುಮಾರ್ ಕಾರ್ಕಳ, ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್ ಯು., ಉಮಾನಾಥ್ ಕೋಟ್ಯಾನ್, ಭಾಗೀರಥಿ ಮುರುಳ್ಯ, ಪ್ರತಾಪ್ ಸಿಂಹ ನಾಯಕ್, ಭರತ್ ಶೆಟ್ಟಿ ವೈ., ಪಕ್ಷದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಪ್ರಮುಖರಾದ ಪ್ರಮೋದ್ ಮಧ್ವರಾಜ್ ಹಾಗೂ ಜೆಡಿಎಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.