June 30, 2025

Vokkuta News

kannada news portal

ದ.ಕ.ಜಿಲ್ಲಾ ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜಯಂತಿ ಆಚರಣೆ.

ಮಂಗಳೂರು: ಸಂವಿಧಾನ ಶಿಲ್ಪಿ ಡಾ.ಭೀಮ್ ರಾವ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಇಂದು ಮಂಗಳೂರು ಮಲ್ಲಿಕಟ್ಟೆಯಲ್ಲಿನ ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಚರಿಸಲಾಯಿತು.
ಜಿಲ್ಲಾ ಕಚೇರಿಯಲ್ಲಿ ನಡೆದ ಕಿರು ಸಭೆಯಲ್ಲಿ ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರು ಡಾಕ್ಟರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸುವ ಮಹತ್ವ ಮತ್ತು ಅವರ ಕೊಡುಗೆಯನ್ನು ವಿವರಿಸಿದರು.

ಕಾಂಗ್ರೆಸ್ ದ.ಕ. ಉಪಾಧ್ಯಕ್ಷರಾದ ಕೆ.ಅಶ್ರಫ್ ( ಮಾಜಿ ಮೇಯರ್),ಮಾಜಿ ಮೇಯರ್ ಮಹಾಬಲ ಮಾರ್ಲ, ಮಹಾ ನಗರ ಪಾಲಿಕೆ ಸದಸ್ಯರಾದ ವಿನಯ ರಾಜ್, ವಿಶ್ವಾಸ್ ದಾಸ್,ಬ್ಲಾಕ್ ಅಧ್ಯಕ್ಷರಾದ ಪ್ರಕಾಶ್ ಸಾಲ್ಯಾನ್,ಮಂಜುಳಾ ನಾಯಕ್, ನಝೀರ್ ಬಜಾಳ್,ಶಬೀರ್,ನೀರಜ್ ಪಾಲ್, ನೊಣಯ್ಯ, ಭಾಸ್ಕರ್ ರಾವ್ ಮಾಜಿ ಪಾಲಿಕೆ ಸದಸ್ಯರು ಮುಂತಾದ ಪ್ರಮುಖರು ಉಪಸ್ಥಿತರಿದ್ದರು.