June 13, 2024

Vokkuta News

kannada news portal

ಉತ್ತರ ಕನ್ನಡ ಚುನಾವಣಾ ಪ್ರಚಾರ:ರಮಾನಾಥ ರೈ ನೇತೃತ್ವದಲ್ಲಿ ಕೆ.ಅಶ್ರಫ್, ಶಶಿಧರ ಹೆಗ್ಡೆ,ನವೀನ್ ಡಿ’ಸೋಜಾ,ರಮಾನಂದ ಬೋಳಾರ್ ನೇಮಕ.

ಮಂಗಳೂರು: ರಾಜ್ಯದಲ್ಲಿ ಮೇ 07 ರಂದು ಎರಡನೇ ಹಂತದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷರೂ ಆಗಿರುವ ರಮಾನಾಥ ರೈ ಅವರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

ದ.ಕ.ಲೋಕಸಭಾ ಚುನಾವಣೆಯನ್ನು ಜಿಲ್ಲೆಯಲ್ಲಿ ಪಕ್ಷದ ಸರ್ವ ಕಾರ್ಯಕರ್ತರ ಜೊತೆ ಸೇರಿ ಅತ್ಯಂತ ಅಚ್ಚುಕಟ್ಟಾಗಿ ನಡೆಸಿರುತ್ತೀರಿ. ಮೇ.7 ರಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದ್ದು, ತಮ್ಮ ಅಪಾರ ರಾಜಕೀಯ ಅನುಭವ ಮತ್ತು ಚುನಾವಣಾ ತಂತ್ರಗಳನ್ನು ಧಾರೆಯೆರೆದು ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸಿ ಪ್ರಚಾರ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಗೆಲುವಿಗೆ ಶ್ರಮಿಸುವಂತೆ ರಮಾನಾಥ ರೈ ಅವರಿಗೆ ಕೆಪಿಸಿಸಿ ಅಧ್ಯಕ್ಷರು ನಿರ್ದೇಶಿಸಿರುವುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಮಾಜಿ ಸಚಿವರಾದ ರಮಾನಾಥ ರೈ ನೇತೃತ್ವದಲ್ಲಿ ಜೊತೆಗೂಡಿ ಉತ್ತರಕನ್ನಡ ಕ್ಷೇತ್ರದಲ್ಲಿ ಪ್ರಚಾರ ನಡೆಸಲು ಮಾಜಿ ಮೇಯರಾದ ಶಶಿಧರ್ ಹೆಗ್ಡೆ, ಕೆ.ಅಶ್ರಫ್, ಕಾರ್ಪೊರೇಟರ್ ನವೀನ್ ಡಿಸೋಜ ಮತ್ತು ರಮಾನಂದ ಬೋಳಾರ್ ಅವರನ್ನು ನೇಮಕ ಮಾಡಲಾಗಿದೆ,ಎಂದು ತಿಳಿಸಲಾಗಿದೆ.