July 26, 2024

Vokkuta News

kannada news portal

ಮಂಗಳೂರು ಧಾರ್ಮಿಕ ಸಂಸ್ಥೆಗಳಲ್ಲಿ ಕೋವಿಡ್ ಶುಶ್ರೂಷಾ ಕೇಂದ್ರ,ಚಿಂತನೆ: ಕೆ.ಅಶ್ರಫ್.

ಮಂಗಳೂರು ನಗರದ ಬಂದರ್ ವಾರ್ಡ್ ವ್ಯಾಪ್ತಿಯಲ್ಲಿ ಅಗತ್ಯತೆ ಆಧಾರದಲ್ಲಿ ಧಾರ್ಮಿಕ ಸಂಸ್ಥೆಗಳನ್ನು ಕೋವಿಡ್ ರೋಗಿಗಳಿಗೆ ಪ್ರಾಥಮಿಕ ಐಸೋಲೇಶನ್ ಘಟಕಗಳಾಗಿ ಬಳಕೆ ಮಾಡಲು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು ಮನಪಾ ಸಹಕಾರ,ಅನುಮತಿ ಯೊಂದಿಗೆ ನಡೆಸಲು ಚಿಂತನೆ ಮಾಡಲಾಗಿದೆ.

ಜಿಲ್ಲೆಯಾದ್ಯಂತ ಕೋವಿಡ್ ಪ್ರಕರಣಗಳು ಅಧಿಕವಾಗುತ್ತಿದ್ದು,ನಗರದ ಆಸ್ಪತ್ರೆಗಳಲ್ಲಿ ಪ್ರಾಥಮಿಕ ವೈದ್ಯಕೀಯ ಸೌಕರ್ಯಗಳ ಕೊರತೆ ಸಂಭವಿಸಿದರೆ ಪರ್ಯಾಯ ವ್ಯವಸ್ಥೆಗಾಗಿ ಬಂದರ್ ಮತ್ತು ಕುದ್ರೋಳಿ ವಾರ್ಡ್ ನಲ್ಲಿನ ಧಾರ್ಮಿಕ ಸಂಸ್ಥೆಗಳ ಆಡಳಿತ ಮಂಡಳಿಯ ಸಹಕಾರದೊಂದಿಗೆ,ಧಾರ್ಮಿಕ ಸಂಸ್ಥೆಗಳ ಕಟ್ಟಡಗಳನ್ನು ಸ್ಥಳೀಯ ಇಲಾಖೆಗಳ ಸಹಕಾರದೊಂದಿಗೆ ಕೋವಿಡ್ ಪ್ರಾಥಮಿಕ ಶುಶ್ರೂಷಾ ಕೇಂದ್ರವಾಗಿ ಮಾರ್ಪಡಿಸಲು ಚಿಂತನೆ ನಡೆಸಲಾಗಿದೆ, ಇದರೊಂದಿಗೆ ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಆಂಬುಲೆನ್ಸ್ ವಾಹನ ಸೇವೆ, ಸ್ಥಳೀಯ ವೈದ್ಯರು ಮತ್ತು ಲಭ್ಯ ಪ್ಯಾರಾ ಮೆಡಿಕ್ ವ್ಯಕ್ತಿಗಳ ಸೇವೆಯನ್ನು ಪಡೆದು ಕೋವಿಡ್ ನಿಯಂತ್ರಣ ಹೊಂದಲು ಜಿಲ್ಲಾಡಳಿತಕ್ಕೆ ಸಹಕಾರ ಮತ್ತು ಲಭ್ಯವಿರುವ ಸಂಪನ್ಮೂಲಗಳನ್ನು ಬಳಕೆ ಮಾಡುವುದಾಗಿ ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಸಂಬಂಧ ಪಟ್ಟವರಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಕೆ.ಅಶ್ರಫ್ (ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.